TSK

TSK · ಪ್ರಸಂಗಿ 3:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

¶ ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,

¶ ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

¶ ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

¶ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?

¶ ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.

ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

‹ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.›