TSK

TSK · ಪ್ರಸಂಗಿ 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.

ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.

ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.

ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.