¶ ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
TSK
TSK · ಪ್ರಸಂಗಿ 4:14
Treasury of Scripture Knowledge references in ಕನ್ನಡ IRV.
¶ ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
¶ ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.
ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.