ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
TSK
TSK · ಪ್ರಸಂಗಿ 4:16
Treasury of Scripture Knowledge references in ಕನ್ನಡ IRV.
2 ಸಮುವೇಲನು 15:12
TSK
2 ಸಮುವೇಲನು 19:9
TSK
¶ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
1 ಅರಸುಗಳು 1:40
TSK
ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
ಪ್ರಸಂಗಿ 1:14
TSK
ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
ಪ್ರಸಂಗಿ 2:17
TSK
¶ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.