¶ ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
TSK
TSK · ಪ್ರಸಂಗಿ 5:1
Treasury of Scripture Knowledge references in ಕನ್ನಡ IRV.
ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.
ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.
ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.
“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?
ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.
ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.