¶ ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
TSK
TSK · ಪ್ರಸಂಗಿ 5:2
Treasury of Scripture Knowledge references in ಕನ್ನಡ IRV.
¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
‹ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.›
ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.