ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
TSK
TSK · ಪ್ರಸಂಗಿ 6:10
Treasury of Scripture Knowledge references in ಕನ್ನಡ IRV.
ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?
ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?
ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
¶ “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.