TSK

TSK · ಪ್ರಸಂಗಿ 7:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.

¶ “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,

ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?

ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.