ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
TSK
TSK · ಪ್ರಸಂಗಿ 7:6
Treasury of Scripture Knowledge references in ಕನ್ನಡ IRV.
“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
‹ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.›
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.