ಯೋಬನು 11:7
TSK
ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
TSK
Treasury of Scripture Knowledge references in ಕನ್ನಡ IRV.
ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
¶ ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.