TSK

TSK · ಪ್ರಸಂಗಿ 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.

ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.

ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.

ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.

ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.

¶ ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.

ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.

ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.