TSK

TSK · ಪ್ರಸಂಗಿ 9:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.

ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.

¶ ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.

ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.

¶ ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.

ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

ಆತನು, ‹“ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು”› ಅಂದನು.

ಯೇಸು ಅವನಿಗೆ ‹“ಹೋಗು ನಿನ್ನ ಮಗನು ಬದುಕುತ್ತಾನೆ”› ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.