TSK

TSK · ಎಸ್ತೇರಳು 10:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.

ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.

ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.

¶ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.