ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
TSK
TSK · ಎಸ್ತೇರಳು 3:1
Treasury of Scripture Knowledge references in ಕನ್ನಡ IRV.
ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.
ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.