TSK

TSK · ಎಸ್ತೇರಳು 3:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.

ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.

ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.

¶ ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.