TSK

TSK · ಎಸ್ತೇರಳು 3:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.

ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.

ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.

ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;

¶ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.

ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.

¶ ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,