TSK

TSK · ಎಸ್ತೇರಳು 4:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.

ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.

ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

¶ ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.