¶ ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
TSK
TSK · ಎಸ್ತೇರಳು 5:1
Treasury of Scripture Knowledge references in ಕನ್ನಡ IRV.
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
¶ ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.
‹ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.›
‹ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.›
‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›