TSK

TSK · ಎಸ್ತೇರಳು 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.

“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.

ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.

ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.