TSK

TSK · ಎಸ್ತೇರಳು 8:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.

¶ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.

ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.

ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.

¶ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.

ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;