TSK

TSK · ಎಸ್ತೇರಳು 8:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.

ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.

ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.

ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.

ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.