ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.
TSK
TSK · ವಿಮೋಚನಕಾಂಡ 1:11
Treasury of Scripture Knowledge references in ಕನ್ನಡ IRV.
¶ ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.
¶ ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.
ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?
ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.