TSK

TSK · ವಿಮೋಚನಕಾಂಡ 10:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.

ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,

ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.

¶ ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ

ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.

ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,

ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.

ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”

ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.