ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.
TSK
TSK · ವಿಮೋಚನಕಾಂಡ 11:2
Treasury of Scripture Knowledge references in ಕನ್ನಡ IRV.
ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.
¶ ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.
ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,
ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›