TSK

TSK · ವಿಮೋಚನಕಾಂಡ 11:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.

ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.

ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.

ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.