TSK

TSK · ವಿಮೋಚನಕಾಂಡ 11:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.

‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.

ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.

ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.

ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›