TSK

TSK · ವಿಮೋಚನಕಾಂಡ 12:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.

“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.

ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.

¶ “ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.