ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
TSK
TSK · ವಿಮೋಚನಕಾಂಡ 12:14
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.
ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
¶ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
¶ ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
¶ ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ”› ಹೇಳುವರು.
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.