¶ “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
TSK
TSK · ವಿಮೋಚನಕಾಂಡ 12:22
Treasury of Scripture Knowledge references in ಕನ್ನಡ IRV.
ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.
ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
¶ ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.