ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
TSK
TSK · ವಿಮೋಚನಕಾಂಡ 12:29
Treasury of Scripture Knowledge references in ಕನ್ನಡ IRV.
¶ ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
¶ ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.
ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.
ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.
ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
¶ ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.