TSK

TSK · ವಿಮೋಚನಕಾಂಡ 12:49

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

¶ “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”

ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.