TSK

TSK · ವಿಮೋಚನಕಾಂಡ 12:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.

ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.