TSK

TSK · ವಿಮೋಚನಕಾಂಡ 13:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.

ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.

ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,

¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’

ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.

¶ ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ

ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ

ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’

ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.

ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,

ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.

ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.