TSK

TSK · ವಿಮೋಚನಕಾಂಡ 14:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.

ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.

ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.

ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,

ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.

ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.

ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.

ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.

ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.

ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.

ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?

ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.