ವಿಮೋಚನಕಾಂಡ 14:23
TSK
¶ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
TSK
Treasury of Scripture Knowledge references in ಕನ್ನಡ IRV.
¶ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.