TSK

TSK · ವಿಮೋಚನಕಾಂಡ 16:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.

ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

¶ ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.

ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.