TSK

TSK · ವಿಮೋಚನಕಾಂಡ 16:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.

ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು

ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.

ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.

‹ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.›

‹ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.›