TSK

TSK · ವಿಮೋಚನಕಾಂಡ 16:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.

¶ ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.

ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.

ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.

ಯೇಸು ಅವರ ಆಲೋಚನೆಗಳನ್ನು ತಿಳಿದು, ‹“ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?›

‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›

ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.