TSK

TSK · ವಿಮೋಚನಕಾಂಡ 17:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.

ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.

ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ