TSK

TSK · ವಿಮೋಚನಕಾಂಡ 17:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

¶ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.

¶ ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.

ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,

ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

¶ “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.