TSK

TSK · ವಿಮೋಚನಕಾಂಡ 17:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.

ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”

ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.

ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.

¶ ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,