TSK

TSK · ವಿಮೋಚನಕಾಂಡ 18:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.

ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.

ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.

¶ ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.