TSK

TSK · ವಿಮೋಚನಕಾಂಡ 18:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.

ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.