ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
TSK
TSK · ವಿಮೋಚನಕಾಂಡ 19:10
Treasury of Scripture Knowledge references in ಕನ್ನಡ IRV.
ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
¶ ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.