TSK

TSK · ವಿಮೋಚನಕಾಂಡ 19:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.

ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.

“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.

ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.

¶ ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.