¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
TSK
TSK · ವಿಮೋಚನಕಾಂಡ 19:6
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
¶ ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
¶ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.
‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”