TSK

TSK · ವಿಮೋಚನಕಾಂಡ 2:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

¶ ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.