TSK

TSK · ವಿಮೋಚನಕಾಂಡ 20:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.

ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.

ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.

ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;

ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.

“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.