TSK

TSK · ವಿಮೋಚನಕಾಂಡ 20:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

¶ “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

¶ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,

ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,

ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.

ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.

ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.

ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.

ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.

¶ ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.