ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
TSK
TSK · ವಿಮೋಚನಕಾಂಡ 20:8
Treasury of Scripture Knowledge references in ಕನ್ನಡ IRV.
¶ ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
¶ ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
¶ “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.
ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.